ಸುದ್ದಿ

78ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಧೀರ್ಘ ಭಾಷಣ

Share It

ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ 2036ರ ಒಲಿಂಪಿಕ್‌ಗೆ ಆತಿಥ್ಯ ವಹಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಪ್ಯಾರಿಸ್‌ ಒಲಿಂಪಿಕ್‌ನಲ್ಲಿ ಪದಕ
ಗೆದ್ದ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಸ್ವಾತಂತ್ರೋತ್ಸವ ಅಂಗವಾಗಿ ಕೆಂಪು ಕೋಟೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲೂ ಪದಕ ವಿಜೇತ ಕ್ರೀಡಾಪಟುಗಳಿಗೆ ಆಹ್ವಾನಿಸಲಾಗಿತ್ತು. ಈ ವೇಳೆ ಪ್ರಧಾನಿ ಅವರು ಒಲಿಂಪಿಕ್ ಕ್ರೀಡಾಪಟುಗಳಿಗೆ ಅಭಿನಂದನೆ ತಿಳಿಸಿದರು.

ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳ ಕುರಿತು ರಾಜ್ಯ ಸರ್ಕಾರಗಳು ಅತ್ಯಂತ ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಅವರ ವಿರುದ್ಧ ಹಿಂಸಾಚಾರದ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ‘ಈ ವಿಚಾರವಾಗಿ ಜನರಿಂದ ವ್ಯಕ್ತವಾಗುತ್ತಿರುವ ಆಕ್ರೋಶ ನನಗೆ ಅರ್ಥವಾಗುತ್ತದೆ’ ಎಂದರು.
ಮಹಿಳೆಯರ ಮೇಲಿನ ಅಪರಾಧಗಳ ಕುರಿತು ತ್ವರಿತವಾಗಿ ತನಿಖೆ ನಡೆಸಬೇಕು. ಇಂತಹ ಪೈಶಾಚಿಕ ಕೃತ್ಯಗಳನ್ನು ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದ ಅವರು, ‘ಇಂತಹ ಕೃತ್ಯಗಳ ಬಗ್ಗೆ ಸಮಾಜವು ಸಹ ಆತ್ಮಾವಲೋಕನ ನಡೆಸಬೇಕು’ ಎಂದರು.

ಮಹಿಳೆ ಕುರಿತು ಮಾತನಾಡಿದ ಪ್ರಧಾನಿ ವೇತನ ಸಹಿತ ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಲಾಗಿದೆ. ತಾಯಿಯ ಆರೈಕೆಯಲ್ಲಿ ಬೆಳೆಯುವ ಮಗು ಮಾದರಿ ಪ್ರಜೆಯಾಗಬಲ್ಲ ಎಂಬ ಉದಾತ್ತ ಚಿಂತನೆಯೇ ಇಂತಹ ನಿರ್ಧಾರಕ್ಕೆ ಕಾರಣ

10 ಕೊಟಿಗೂ ಅಧಿಕ ಮಹಿಳೆಯರನ್ನು ಸ್ವಸಹಾಯ ಗುಂಪುಗಳಿಗೆ ಸೇರ್ಪಡೆ ಮಾಡಲಾಗಿದೆ. ಕುಟುಂಬದಲ್ಲಿ ನಿರ್ಧಾರ ಕೈಗೊಳ್ಳುವಲ್ಲಿ ಹಾಗೂ ಸಾಮಾಜಿಕ ಬದಲಾವಣೆಯಲ್ಲಿ ಅವರ ಪಾತ್ರ ಹೆಚ್ಚಿದೆ ಎಂದರು.
ಉದ್ಯೋಗ, ನಾವೀನ್ಯತೆ, ಉದ್ಯಮಶೀಲತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ “ಮಹಿಳೆ ಕೇಂದ್ರಿತ ಅಭಿವೃದ್ಧಿ ಮಾದರಿ’ಗೆ ಉತ್ತೇಜನ ನೀಡಲಾಗುವುದು ಎಂದರು.

ವಿಕಸಿತ ಭಾರತ 2047′ ಎಂಬುದು ಕೇವಲ ಪದಪುಂಜವಲ್ಲ. 140 ಕೋಟಿ ಭಾರತೀಯರ ಕನಸು ಮತ್ತು ಸಂಕಲ್ಪ ಎಂದರು.ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡಲು ಬಾಹ್ಯಾಕಾಶ ಕ್ಷೇತ್ರದಲ್ಲಿಯೂ ಪ್ರಗತಿ ಅಗತ್ಯ. ಉಜ್ವಲ ಭವಿಷ್ಯ ಇರುವ ಈ ಕ್ಷೇತ್ರವನ್ನು ಬಲಪಡಿಸಲಾಗುತ್ತಿದೆ ಚಂದ್ರಯಾನ ಕಾರ್ಯಕ್ರಮದ ಯಶಸ್ಸು ದೇಶದ ಯುವ ಸಮುದಾಯದಲ್ಲಿ ವೈಜ್ಞಾನಿಕ ಮನೋಧರ್ಮ ಹೆಚ್ಚುವಂತೆ ಮಾಡಿದೆ.

ಶಿಕ್ಷಣ ಕುರಿತು ಮಾತನಾಡಿದ ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ಹೋಗುವ ಅಗತ್ಯವಿಲ್ಲದಂತಹ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವ ಬಯಕೆ ಇದೆ ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಮುಂದಿನ ಐದು ವರ್ಷಗಳಲ್ಲಿ 75 ಸಾವಿರ ಹೊಸ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದರು.

ವಿಜ್ಞಾನ-ತಂತ್ರಜ್ಞಾನ 5ಜಿ ತಂತ್ರಜ್ಞಾನಕ್ಕೆ ತ್ವರಿತವಾಗಿ ಚಾಲನೆ ನೀಡಲಾಗಿದ್ದರೂ, 6ಜಿ ತಂತ್ರಜ್ಞಾನ ಕುರಿತು ಸಮರೋಪಾದಿಯಲ್ಲಿ ಕೆಲಸ ಮಾಡಲಾಗುತ್ತಿದೆ

ಭಾರತದಲ್ಲಿ ವಿನ್ಯಾಸಗೊಳಿಸಿ’ ಎಂಬ ಮಂತ್ರದಿಂದ ಶುರುವಾದ ನಮ್ಮ ಪಯಣ, ಈಗ ‘ವಿಶ್ವಕ್ಕಾಗಿ ವಿನ್ಯಾಸಗೊಳಿಸಿ’ ಎಂಬ ಧೈಯವಾಕ್ಯದೊಂದಿಗೆ ಸಾಗಬೇಕಿದೆ ಎಂದು ದೇಶದ ಜನತೆಗೆ ಸಂದೇಶ ನೀಡಿದರು.


Share It

You cannot copy content of this page