ಸುದ್ದಿ

ದೇವರಕಗ್ಗಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

Share It

ಸತ್ಕೃತಿ ಫೌಂಡೇಶನ್, ಬೆಂಗಳೂರು ಬುಲೆಟ್ ಕ್ಲಬ್, RX Owners ಕ್ಲಬ್, ABC ಕ್ಲಬ್ ವತಿಯಿಂದ ಶಾಲೆಗೆ ಟಿವಿ, ವಿದ್ಯಾರ್ಥಿಗಳಿಗೆ ಬ್ಯಾಗ್ ಉಡುಗೊರೆ

ರಾಮನಗರ: ಕನಕಪುರ ತಾಲೂಕಿನ ದೇವರಕಗ್ಗಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ವಿಶೇಷ ಹಾಗೂ ವೈವಿಧ್ಯಮಯವಾಗಿ ಆಚರಿಸಲಾಯಿತು.

ಸತ್ಕೃತಿ ಫೌಂಡೇಶನ್, ಬೆಂಗಳೂರು ಬುಲೆಟ್ ಕ್ಲಬ್, RX ಓನರ್ಸ್ ಕ್ಲಬ್,ABC ಕ್ಲಬ್ ನವರು ಸಹಯೋಗದಲ್ಲಿ ಸರ್ಕಾರಿ ಶಾಲೆಗೆ ಟಿವಿ ಹಾಗೂ ವಿದ್ಯಾರ್ಥಿಗಳಿಗೆ ಬ್ಯಾಗ್ ಗಳನ್ನು ಉಡುಗೊರೆಯಾಗಿ ನೀಡಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಾದರಿಯಾದರು.

ಇನ್ನೂ ಈ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಅಲ್ಲದೆ ಶಾಲೆಗೆ ತಟ್ಟೆ,ಲೋಟ,ಮಿಕ್ಸಿ ಸೇರಿದಂತೆ ಅಡಿಗೆ ಉಪಕರಣಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಕೈಜೋಡಿಸಿದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರುಗಳು,ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಹಳೇ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಣಾಸಕ್ತರು, ಶಾಲಾ ಶಿಕ್ಷಕರು ಜೊತೆಯಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿಕೊಟ್ಟರು.

ಇನ್ನು ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳು ದೇಶದ ಏಕತೆ, ಸಂಸ್ಕೃತಿ ಬಿಂಬಿಸುವ ನಾಟಕ, ಹಾಡು,ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಮೆರಗು ನೀಡಿದರು.


Share It

You cannot copy content of this page