ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಸಿಎಂ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು

Share It

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹಿಂದುಳಿದ, ಶೋಷಿತ ಸಮುದಾಯಗಳ ಸ್ವಾಮೀಜಿಗಳು ಸಿಎಂ ಭೇಟಿ ಮಾಡಿ ತಮ್ಮ ನೈತಿಕ ಬೆಂಬಲ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಾಯಕತ್ವದ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ, ವಿಪಕ್ಷಗಳ ಹಾಗೂ ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು, ಈ ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

ಸಿಎಂ ಭೇಟಿ ಮಾಡಿದ ನಿಯೋಗದಲ್ಲಿ ಕಾಗಿನೆಲೆ ಕನಕ ಪೀಠದ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮೀಜಿ, ಜಗದ್ಗುರು ಕುಂಚಿಟಿಗ ಮಹಾ ಸಂಸ್ಥಾನ ಮಠ ಹೊಸದುರ್ಗದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಚಿತ್ರದುರ್ಗದ ಮಾದರ ಚನ್ನಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮೀ, ಮಧುರೆ ಭಗಿರಥ ಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಶಿವಮೊಗ್ಗ ನಾರಾಯಣ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಚಿತ್ರದುರ್ಗದ ಮಡಿವಾಳ ಗುರುಪೀಠದ ಬಸವ ಮಾಚಿದೇವ ಮಹಾಸ್ವಾಮೀಜಿ, ತಂಗಡಗಿ ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಸರೂರು ವಿಜಯನಗರದ ಶಾಂತಮ್ಮಯ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು.


Share It

You cannot copy content of this page