ಸುದ್ದಿ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಚಳವಳಿ

Share It

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಇವರುಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಗಳು ಶನಿವಾರ ಪತ್ರ ಚಳವಳಿ ನಡೆಸಿದವು.

ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಆತುರಾತುರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅದೇ ರಾಜ್ಯಪಾಲರು ತಮ್ಮ ಮುಂದಿರುವ ಇತರ ದೂರುಗಳಿಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ಪತ್ರಚಳವಳಿಯ ಮೂಲಕ ಅಹಿಂದ ಸಂಘಟನೆಗಳು ಒತ್ತಾಯಿಸಿವೆ.


Share It

You cannot copy content of this page