ಸುದ್ದಿ

ರಾಜ್ಯದ ಎಲ್ಲಾ ಜಿಲ್ಲಾ ನೋಂದಣಾಧಿಕಾರಿ, ಉಪನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

Share It

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2024 ನೇ ಸೆಪ್ಟೆಂಬರ್ 02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಬಹುದಾಗಿದೆ. ಈ ನೂತನ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು
ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page