ಸುದ್ದಿ

ರಸ್ತೆ ಅಪಘಾತಗಳಿಗೆ ಚಾಲಕರಲ್ಲ, ರಸ್ತೆ ಎಂಜಿನಿಯರ್ ಗಳ ಅವೈಜ್ಞಾನಿಕ ಯೋಜನೆ ಕಾರಣ: ನಿತಿನ್ ಗಡ್ಕರಿ

Share It

ನವದೆಹಲಿ: ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನು ಹರಕೆಯು ಕುರಿ ಮಾಡುತ್ತೇವೆ. ಈ ಬಗ್ಗೆ ನಾನು ಸೂಕ್ಷ್ಮವಾಗಿ ಗಮನಿಸಿದ್ದು, ರಸ್ತೆ ಎಂಜಿನಿಯರ್‌ಗಳ ತಪ್ಪು ಎದ್ದು ಕಾಣುತ್ತದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದರು

ಎಫ್‌ಐಸಿಸಿಐನಿಂದ ಬುಧವಾರ ಹಮ್ಮಿಕೊಂಡಿದ್ದ 6ನೇ ವರ್ಷದ ರಸ್ತೆ ಸುರಕ್ಷತೆ ಪ್ರಶಸ್ತಿ ಪ್ರದಾನ ಮತ್ತು ಸಮಾವೇಶದಲ್ಲಿ ಅವರು ಮಾತನಾಡಿದ ಅವರು
ಯುದ್ಧ, ಭಯೋತ್ಪಾದನೆ ಮತ್ತು ನಕ್ಸಲೀಯರ ವಿಧ್ವಂಸಕ ಕೃತ್ಯದಿಂದ ಸಂಭವಿಸುವ ಸಾವುಗಳಿಗಿಂತಲೂ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಹೆಚ್ಚಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವೈಜ್ಞಾನಿಕವಾಗಿ ಸಿದ್ಧಪಡಿಸುವ ವಿಸ್ತ್ರತ ಯೋಜನಾ ವರದಿಗಳಿಂದ ಹೆದ್ದಾರಿಗಳಲ್ಲಿ ಬ್ಲಾಕ್ ಸ್ಪಾಟ್ (ಅಪಘಾತ ವಲಯ) ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದರು.

ದೇಶದಲ್ಲಿ ವಾರ್ಷಿಕವಾಗಿ 5 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 1.5 ಲಕ್ಷ ಜನರು ಮೃತಪಡುತ್ತಿದ್ದಾರೆ. 3 ಲಕ್ಷ ಜನರು ಗಾಯಗೊಳ್ಳುತ್ತಿದ್ದಾರೆ. ಇದರಿಂದ ದೇಶದ ಜಿಡಿಪಿಗೆ ಶೇ 3ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು.


Share It

You cannot copy content of this page