ಹುಬ್ಬಳ್ಳಿ: ಪೆರೋಲ್ ಮೇಲೆ ಹೊರಗಿದ್ದ ನಟೋರಿಯಸ್ ರೌಡಿ ಬಚ್ಚಾ ಖಾನ್ ನನ್ನು ಬೆಂಗಳೂರಿನಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಪರೋಲ್ ಮೇಲೆ ಹೊರಗಿದ್ದ ಬಚ್ಚಾಖಾನ್ ಈಗ ಕೊಲೆ ಬೆದರಿಕೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿದ್ದಾನೆ.
ಬಳ್ಳಾರಿ ಜೈಲಿನಲ್ಲಿ ವಿಐಪಿ ಸೆಲ್‌ನಲ್ಲಿ ಇದ್ದ ಈತ ಇತ್ತೀಚೆಗೆ ಪೆರೋಲ್ ಪಡೆದು ಹೊರ ಬಂದಿದ್ದ. ಕೊಲೆ ಸಂಚು ಆರೋಪದಲ್ಲಿ ನಟೋರಿಯಸ್ ರೌಡಿ ಬಚ್ಚಾ ಖಾನ್ ಹಾಗೂ ಆತನ ಗ್ಯಾಂಗ್ ಅನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಈ ಬಚ್ಚಾಖಾನ್ ಅನ್ನು ಬಳ್ಳಾರಿಯ ವಿಐಪಿ ಬ್ಯಾರೆಕ್ ನಲ್ಲಿ ಇರಿಸಲಾಗಿತ್ತು. ಆತ ಪೆರೋಲ್ ಪಡೆದು ಹೊರ ಬಂದು ಮತ್ತೆ ಹಳೇ ಚಾಳಿ ಮುಂದುವರೆಸಿದ್ದ. ಹುಬ್ಬಳ್ಳಿಯಲ್ಲಿ ಮತ್ತೊಬ್ಬರಿಗೆ ಈ ಬಚ್ಚಾಖಾನ್ ಹಾಗೂ ಆತನ ಗ್ಯಾಂಗ್ ಹತ್ಯೆ ಬೆದರಿಕೆ ಹಾಕಿತ್ತು. ಆತನ ಹುಡುಕಾಟದಲ್ಲಿದ್ದ ಹುಬ್ಬಳ್ಳಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹುಬ್ಬಳ್ಳಿಯಲ್ಲಿ 2020ರಲ್ಲಿ ಫ್ರೂಟ್ ಇರ್ಫಾನ್ ಎಂಬುವವನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೌಡಿಗೆ ಶಿಕ್ಷೆ ವಿಧಿಸಲಾಗಿತ್ತು. ಹೀಗಾಗಿ ಜೈಲು ಸೇರಿದ್ದ ಈತ ಪೆರೋಲ್ ಮೇಲೆ ಹೊರಗಿದ್ದ. ಇದೀಗ ಮತ್ತೆ ಕೊಲೆ ಬೆದರಿಕೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾನೆ.