ಸುದ್ದಿ

30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಹಲವರ ವಿರುದ್ಧ ವಿರುದ್ಧ FIR

Share It

ಬೆಂಗಳೂರು: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರೋ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ.

ಮೋಹನ್ ಕುಮಾ‌ರ್ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಪ್ರಕರಣ ಸಂಬಂಧ ನಿರ್ದೇಶಕ ಯೋಗರಾಜ್ ಭಟ್, ಮ್ಯಾನೇಜರ್ ಸುರೇಶ್‌, ಅಸಿಸ್ಟೆಂಟ್‌ ಮ್ಯಾನೇಜ‌ರ್ ಮನೋಹ‌ರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ದ ಲೈಟ್ ಮ್ಯಾನ್ ಸಹೋದರ ಶಿವರಾಜ್‌ ದೂರಿನನ್ವಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಗೋಡೌನ್‌ವೊಂದರಲ್ಲಿ ಬಳಿ ಮನದ ಕಡಲು
ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. 30 ಅಡಿ ಎತ್ತರದ ಅಲ್ಯೂಮಿನಿಯಂ ರೋಸ್ಟಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ ವೇಳೆ ಲೈಟ್ ಮ್ಯಾನ್ ಏಕಾಏಕಿ ಕೆಳಗಡೆ ಬಿದ್ದಿದ್ದಾನೆ. ಪರಿಣಾಮ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿದೆ. ಆ ಕೂಡಲೇ ಆತನನ್ನು ಗೋರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ


Share It

You cannot copy content of this page