ಸುದ್ದಿ

kPSC ನೇಮಕಾತಿ: 3 ವರ್ಷ ವಯೋಮಿತಿ ಸಡಿಲಿಕೆ

Share It

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಕೆಪಿಎಸ್ ಸಿ ನೇಮಕಾತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಅಲ್ಲದೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಈ ನಿಯಮ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದೆ.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೆ.5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಕುರಿತು ತೀರ್ಮಾನ ತೆಗೆದುಕೊಂಡಿದೆ

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ – ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು 3 ವರ್ಷಗಳಿಗೆ ಹೆಚ್ಚಿಸಲು ಕ್ರಮವಾಗಿ ಒಂದು ವರ್ಷದ ಅವಧಿಗೆ ಸಡಿಲಿಕೆ ನೀಡುವ ಬಗ್ಗೆ ಎಂದು ಟಿಪ್ಪಣಿಯಲ್ಲಿ ವಿವರ ನೀಡಲಾಗಿತ್ತು. ಅದರಂತೆ ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಿ,ಅನುಮೋದನೆ ಕೊಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ವಯೋಮಿತಿ ಸಡಿಲಗೊಳಿಸುತ್ತಿರುವುದು ಇದೇ ಮೊದಲಲ್ಲ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿಯೂ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇದೇ ಮಾದರಿಯಲ್ಲಿ ಅವಕಾಶ ನೀಡಲಾಗಿತ್ತು.


Share It

You cannot copy content of this page