ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: ಗೌಪ್ಯ ವಿಚಾರಣೆ ನಿರಾಕರಿಸಿದ ಹೈಕೋರ್ಟ್

Share It

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಿಸಿರುವ ಆತ್ಯಾಚಾರ ಆರೋಪ ಪ್ರಕರಣಗಳಲ್ಲಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿಯೇ ನಡೆಸಲಾಗುವುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಹಾಗೂ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳಲ್ಲಿ ಜಾಮೀನು ಕೋರಿ ಸಂಸದ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ಗೌಪ್ಯ ವಿಚಾರಣೆಯನ್ನು ನಿರಾಕರಿಸಿದೆ.

ನ್ಯಾಯಾಲಯ ನಿತ್ಯವೂ ಇಂತಹ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷವಾದದ್ದೇನೂ ಇಲ್ಲ. ಹೀಗಾಗಿ, ವಿಚಾರಣೆ ವೇಳೆ ಸಂತ್ರಸ್ತರ ಹೆಸರು ಮತ್ತು ಅಶ್ಲೀಲ ವಿಚಾರಗಳನ್ನು ವಕೀಲರು ಓದಬಾರದು. ಬದಲಿಗೆ ಅಂತಹ ವಿವರವನ್ನು ತಿಳಿಸಿದರೆ ನಾನೇ ಓದಿಕೊಳ್ಳುತ್ತೇನೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗಿದೆ.

ಹೊಳೆನರಸೀಪುರದ ನಗರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ವಿರುದ್ಧ ಎಸ್ಐಟಿ 2,144 ಪುಟಗಳ ಆರೋಪಪಟ್ಟಿ ಸಲ್ಲಿಸಿದೆ. ಮನೆಗೆಲಸದಾಕೆ ಮೇಲೆ ಎಸಗಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 1,632 ಪುಟಗಳ ಆರೋಪಪಟ್ಟಿ ಸಲ್ಲಿಸಿದೆ.

ಮೂಲ: LAW TIME


Share It

You cannot copy content of this page