ಬೆಂಗಳೂರು: ಜಾತಿ ನಿಂದನೆ, ಜೀವ ಬೆದರಿಕೆ ಹಾಕಿದ ಆರೋಪ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆ.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಎರಡು ದಿನಗಳ ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ವೈಯಾಲಿ ಕಾವಲ್ ಪೊಲೀಸರು ಮಂಗಳವಾರ ಆರೋಪಿ ಮುನಿರತ್ನ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇದೇ ವೇಳೆ ಆರೋಪಿ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಿ ವಾದ ಮಂಡಿಸಲು ಅವಕಾಶ ಕೋರಿದರು. ಅರ್ಜಿ ವಿಚಾರಣೆ ಇಂದು ಬುಧವಾರಕ್ಕೆ ಮುಂದೂಡಿದ ನ್ಯಾಯಾಧೀಶರು, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.