ದೆಹಲಿ: ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಆಮ್ ಅದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ ನಿಯೋಜಿತ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕಿ ಆತಿಶಿ ಮಂಗಳವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಹಿರಿಯ ನಾಯಕಿ ಆತಿಶಿ ಅವರ ಹೆಸರನ್ನು ಸೂಚಿಸಿದರು. ಆತಿಶಿ ಅವರ ಹೆಸರನ್ನು ಸರ್ವಾನುಮತದಿಂದ ಅನೋದಿಸಿದರು. ಆತಿಶಿ ಅವರು ಅವಿರೋಧವಾಗಿ ಆಯ್ಕೆಯಾದ ಬಳಿಕ ಕೇಜ್ರಿವಾಲ್ ಅವರು ಉಪರಾಜ್ಯಪಾಲರಾದ ವಿ.ಕೆ.ಸಕ್ಸೇನಾ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದರು.