ರಾಮನಗರ: ಜಾತಿನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದ್ದು ಮತ್ತೊಂದು ಎಫ್ಐಆರ್ ಆಗಿದೆ.
ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆ ಬುಧವಾರ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಎಸಗಿ ಹಾಗೂ ಹನಿಟ್ರ್ಯಾಪ್ ಗೆ ಬಳಸಿಕೊಂಡಿರುವ ಬಗ್ಗೆ ದೂರು ಕೊಟ್ಟಿದ್ದಾರೆ. ಆ ದೂರಿನ ಮೇರೆಗೆ ಮುನಿರತ್ನ, ವಿರುದ್ಧ ಪ್ರಕರಣ ದಾಖಲಾಗಿದೆ.
2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ಸಂತ್ರಸ್ತೆ ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.