ಸುದ್ದಿ

ನಾಗಮಂಗಲ ಗಲಭೆ ಪ್ರಕರಣ: ಡಿವೈಎಸ್ಪಿ ಅಮಾನತು

Share It

ಮಂಡ್ಯ: ನಾಗಮಂಗಲದಲ್ಲಿ ಈಚೆಗೆ ನಡೆದ ಗಲಭೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಸುಮಿತ್ ಎ.ಆ‌ರ್. ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶಿಸಿದ್ದಾರೆ.

ಮಂಡ್ಯ ಸಿ.ಇ.ಎನ್ ಪೊಲೀಸ್‌ ಠಾಣೆಯ ಡಿವೈಎಸ್ಪಿ ಶಿವಮೂರ್ತಿ ಜಿ.ಆರ್. ಅವರಿಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನೀಡಲಾಗಿತ್ತು.

ಈ ಗಲಭೆಗೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್ ಅಶೋಕ್ ಕುಮಾ‌ರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.


Share It

You cannot copy content of this page