ಬೆಂಗಳೂರು: ಪ್ರಸಿದ್ಧ ಗಾಳಿ ಅಂಜನೇಯ ದೇವಸ್ಥಾನದಲ್ಲಿ ಹುಂಡಿ ಹಣ ಕಳ್ಳತನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಟ್ರಸ್ಟಿ ಹಾಗೂ ಅರ್ಚಕರ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೇವಸ್ಥಾನದ ಹುಂಡಿ ಹಣ ಎಣಿಸುವಾಗ ನೋಟಿನ ಕಂತೆಗಳನ್ನು ಟ್ರಸ್ಟಿಗಳು ಹಾಗೂ ಅರ್ಚಕರು ಹುಂಡಿ ಹಣ ಕದ್ದಿರುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಈ ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ದೇವಾಲಯದ ಭಕ್ತ ಮೋಹನ್ ಎಂಬವರು ನೀಡಿದ ದೂರು ಆಧರಿಸಿ, ದೇವಸ್ಥಾನದ ಟ್ರಸ್ಟಿಗಳಾದ ಹನುಮಂತಪ್ಪ, ನಾಗರಾಜ್, ಶ್ರೀನಿವಾಸ್ ರಾಮಾನುಜ, ಗೋಪಿನಾಥ್, ರಾಮಾನುಜ ಭಟ್ಟಾಚಾರ್ಯ ಮತ್ತು ಸುರೇಶ್ ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.