ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮೂರು ವರ್ಷದಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಫಿಲಂ ಸಿಟಿ( ಚಿತ್ರ ನಗರಿ) ನಿರ್ಮಿಸಲು ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿ 160 ಎಕರೆ ಪ್ರದೇಶದಲ್ಲಿ ಫಿಲಂ ಸಿಟಿಯನ್ನು ಮೂರು ನಿರ್ಮಿಸಲಾಗುವುದು ಎಂದರು.
ದಸರಾ ಮಹೋತ್ಸವದ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.