ಸುದ್ದಿ

ಉದ್ಯಮಿಗೆ ಜೀವ ಬೆದರಿಕೆ ಹಾಕಿದ ಆರೋಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ FIR

Share It

ಬೆಂಗಳೂರು: ಕೋಟ್ಯಾಂತರ ರೂಪಾಯಿ ಹಣ
ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಎಂಬವರ ವಿರುದ್ಧ ಉದ್ಯಮಿ ವಿಜಯ್ ಟಾಟಾ ಎಂಬವರು ಇಂದು ನಗರದ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ.

ದಾಸರಹಳ್ಳಿ ನಿವಾಸಿಯಾಗಿರುವ ದೂರುದಾರ ವಿಜಯ್ ಟಾಟಾ ಅವರು ರಿಯಲ್ ಎಸ್ಟೇಟ್ ಉದ್ಯಮಿ. 2018ರಿಂದ ಜೆಡಿಎಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಸದ್ಯ ಪಕ್ಷದ ಸಾಮಾಜಿಕ ಜಾಲತಾಣದ ವಿಭಾಗದ ಉಪಾಧ್ಯಕ್ಷರಾಗಿದ್ದಾರೆ.ಎಫ್‌ಐಆರ್‌ನಲ್ಲಿ ಮೊದಲ ಆರೋಪಿ ರಮೇಶ್ ಹಾಗೂ ಎರಡನೇ ಆರೋಪಿಯಾಗಿ ಕುಮಾರಸ್ವಾಮಿ ಅವರನ್ನು ಹೆಸರಿಸಲಾಗಿದೆ.

ದೂರಿನಲ್ಲಿ ಏನಿದೆ? “2019ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳನ್ನು ಕೈಗೊಂಡಿದ್ದು, ಇದಕ್ಕೆ ವೈಯಕ್ತಿಕವಾಗಿ ಕೋಟ್ಯಂತರ ರೂಪಾಯಿ ಹಣವನ್ನೂ ಸಹ ಖರ್ಚು ಮಾಡಿದ್ದೇನೆ.

ಮಾಜಿ ಎಂಎಲ್‌ಸಿ ರಮೇಶ್ ಗೌಡ ಅವರು ಕಳೆದ ಆಗಸ್ಟ್ 24ರಂದು ಮನೆಗೆ ಬಂದು ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡುವುದು ಅಂತಿಮವಾಗಿದೆ ಎಂದು ಪ್ರಸ್ತಾಪಿಸಿ ಕುಮಾರಸ್ವಾಮಿ ಅವರಿಗೆ ಕರೆ ಮಾಡಿಸಿ ಮಾತನಾಡಿದರು.ಆಗ ಅವರು ‘ಈ ಬಾರಿ ಚನ್ನಪಟ್ಟಣ
ಉಪಚುನಾವಣೆಯಲ್ಲಿ ನಮಗೆ ಗೆಲುವು ಅನಿವಾರ್ಯ.ಚುನಾವಣಾ ವೆಚ್ಚಕ್ಕಾಗಿ 50 ಕೋಟಿ ರೂಪಾಯಿ ಹಣಕೊಡಬೇಕಾಗುತ್ತದೆ’ ಎಂದರು.

ನಾನು ಕೂಡಲೇ ‘ಸರ್
ನನ್ನ ಬಳಿ ಅಷ್ಟೊಂದು ಹಣವಿಲ್ಲ, ನಾನು ನನ್ನ ರಿಯಲ್
ಎಸ್ಟೇಟ್ ಪ್ರಾಜೆಕ್ಟ್‌ಗಳನ್ನು ಕಂಪ್ಲೇಟ್ ಮಾಡಬೇಕು.
ಹೀಗಾಗಿ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು
ಪ್ರಯತ್ನಿಸುತ್ತೇನೆ ಎಂದು ಉತ್ತರಿಸಿದೆ. ನನ್ನ
ಮಾತಿನಿಂದ ಕೋಪಗೊಂಡ ಕುಮಾರಸ್ವಾಮಿ ಅವರು
50 ಕೋಟಿ ರೆಡಿ ಮಾಡಿ ಇಲ್ಲದೇ ಹೋದರೇ ನಾನು
ಏನು ಮಾಡುತ್ತೀನೋ ಗೊತ್ತಿಲ್ಲ, ನೀವು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಬೆದರಿಕೆ
ಹಾಕಿ ಫೋನ್ ಕಟ್ ಮಾಡಿದರು. ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


Share It

You cannot copy content of this page