ಸುದ್ದಿ

ಮಾನವ ಹಕ್ಕು ಉಲ್ಲಂಘನೆ ಆರೋಪ: ಬಿಗ್ ಬಾಸ್ ರಿಯಾಲಿಟಿ ಶೋ ವಿರುದ್ಧ ದೂರು

Share It

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವಹಕ್ಕುಗಳ ಹರಣವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.

ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಗಳನ್ನು ನರಕವಾಸ ಎಂಬ ಕಾನ್ಸೆಪ್ಟ್ ನಡಿಯಲ್ಲಿ ಕೂಡಿಟ್ಟು ಸರಿಯಾದ ಆಹಾರ ಕೊಡದೆ ಹಿಂಸಿಸಲಾಗುತ್ತಿರುವ ಕುರಿತು ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ಮಾನವ ಹಕ್ಕು ಆಯೋಗ ಪ್ರಕರಣ (ಕೇಸ್ 2. 4044/10/31/2024-V) ದಾಖಲಿಸಿಕೊಂಡಿದೆ.

ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದ ಆರಂಭದಲ್ಲಿಯೇ ಸ್ವರ್ಗ ಮತ್ತು ನರಕ ಎಂಬ ಎರಡು ಮನೆಗಳನ್ನು ಸೃಷ್ಟಿಸಲಾಗಿದ್ದು, ಒಟ್ಟು ಹದಿನೇಳು ಸ್ಪರ್ಧಿಗಳ ಪೈಕಿ 10 ಮಂದಿಯನ್ನು ಸ್ವರ್ಗಕ್ಕೂ, 7 ಮಂದಿಯನ್ನು ನರಕದಲ್ಲೂ ಇರಿಸಲಾಗಿದೆ. ನರಕ ನಿವಾಸಿಗಳನ್ನು ಜೈಲಿನ ಖೈದಿಗಳ ಹಾಗೆ ಒಂದು ಬ್ಯಾರಾಕ್ ನಲ್ಲಿ ಬಂಧಿ ಮಾಡಿ ಇಡಲಾಗಿದೆ. ಅವರಿಗೆ ಶೋ ಆರಂಭಗೊಂಡ ದಿನದಿಂದ ಕೇವಲ ಗಂಜಿ ಊಟ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಅವರಿಗೆ ಪ್ರತ್ಯೇಕ ಶೌಚಾಲಯದ ಅವಕಾಶವೂ ಇಲ್ಲ. ಸ್ವರ್ಗ ನಿವಾಸಿಗಳನ್ನು ವಿನಂತಿಸಿ ಅವರು ಬೀಗ ತೆಗೆದರಷ್ಟೇ ಅವರು ಶೌಚಾಲಯಕ್ಕೆ ಹೋಗಲು ಸಾಧ್ಯ. ಈ ರೀತಿ ಸ್ಪರ್ಧಾಳುಗಳನ್ನು ನಡೆಸಿಕೊಳ್ಳುವ ಮೂಲಕ ಮಾನವ ಹಕ್ಕುಗಳ ಹರಣ ಮಾಡಲಾಗುತ್ತಿದೆ ಎಂದು ನಾಗಮಣಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Share It

You cannot copy content of this page