ಸುದ್ದಿ

ಜೆಡಿಎಸ್ ಕಾರ್ಯಕರ್ತನ ಹತ್ಯೆ ಕೇಸ್: ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

Share It

ಬೆಂಗಳೂರು: ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತ ಚಿಕ್ಕಯ್ಯ ಎಂಬುವರ ಹತ್ಯೆ ಪ್ರಕರಣದಲ್ಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಂಡ್ಯ ಗ್ರಾಮಾಂತರ ಪೊಲೀಸರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಮತ್ತು ಉಮೇಶ್ ಅಡಿಗ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಈ ಪ್ರಕರಣದಲ್ಲಿ 15 ಆರೋಪಿಗಳಲ್ಲಿ ಕೋಟ್೯ ಐದು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು,ಇನ್ನುಳಿದ ಹತ್ತು ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿಹಿಡಿದಿದೆ.
ದಂಡದ ಒಟ್ಟು ಮೊತ್ತದಲ್ಲಿ 2.25 ಲಕ್ಷ ರೂ.ಗಳನ್ನು ಮೃತರ ಕುಟುಂಬದವರಿಗೆ ನೀಡುವಂತೆ ಆದೇಶದಲ್ಲಿ ಸೂಚಿಸಿದೆ.


Share It

You cannot copy content of this page