ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ 400 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿ, ಅವರ ವಿಡಿಯೋಗಳನ್ನು ಮಾಡಿಕೊಂಡಿದ್ದಾರೆಂದು ಸಾರ್ವ ಜನಿಕವಾಗಿ ಸುಳ್ಳು ಹರಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ನಿರ್ದೇಶಿಸಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ 25 ಸಾವಿರ ರು. ದಂಡ ವಿಧಿಸಿದೆ.
ಅಖಿಲ ಕರ್ನಾಟಕ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಚಿ.ನಾ. ರಾಮು ಮತ್ತದರ ಮಹಿಳಾ ಘಟಕದ ರಾಷ್ಟ್ರೀಯ ಕಾರ್ಯದರ್ಶಿ ಸುಶೀಲಾ ದೇವರಾಜ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ, 25 ಸಾವಿರ ರು.ದಂಡ ವಿಧಿಸಿದ್ದು,ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗೆ ದಂಡದ ಹಣ ಪಾವತಿಸುವಂತೆ ಸೂಚಿಸಿದೆ.