ಸುದ್ದಿ

ಸಿಪಿಎಂ ಕಾರ್ಯಕರ್ತನ ಹತ್ಯೆ ಪ್ರಕರಣ: ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

Share It

ತಿರುವನಂತಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಸಿಪಿಎಂ ಕಾರ್ಯಕರ್ತನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರ್‌ಎಸ್ಎಸ್-ಬಿಜೆಪಿಯ ನಾಲ್ವರು ಕಾರ್ಯಕರ್ತರಿಗೆ ಕೇರಳದ ಕಣ್ಣೂರು ಜಿಲ್ಲೆಯ ತಲಕ್ಕೇರಿಯ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸಿಪಿಎಂ ಕಾರ್ಯಕರ್ತ ಸಿ. ಅಶ್ರಫ್ ಎಂಬುವರನ್ನು ರಾಜಕೀಯ ವೈಷಮ್ಯದ ಕಾರಣಕ್ಕೆ 2011ರ ಮೇ 19ರಂದು ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಎಂ. ಪ್ರನುಬಾಬು, ವಿ. ಶಿಜಿಲ್‌, ಆ‌ರ್.ವಿ. ನಿಧೀಶ್, ಕೆ. ಉಜೇಶ್ ಇವರನ್ನು ಅಪರಾಧಿಗಳೆಂದು ಪರಿಗಣಿಸಿದ ನ್ಯಾಯಾಲಯ ಈ ನಾಲ್ವರಿಗೆ ಜೀವಾವಧಿ ಶಿಕ್ಷೆ, ತಲಾ ₹80 ಸಾವಿರ ದಂಡ ಕೂಡ ವಿಧಿಸಿದೆ. ದಂಡದ ಮೊತ್ತವನ್ನು  ಮೃತ ಸಿಪಿಎಂ ಕಾರ್ಯಕರ್ತ ಅಶ್ರಫ್ ಅವರ ಕುಟುಂಬದ ಸದಸ್ಯರಿಗೆ ನೀಡುವಂತೆ ಆದೇಶಿಸಿದೆ.

ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಎಂಟು ಮಂದಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಇಬ್ಬರು ಈಗಾಗಲೇ ಮೃತಪಟ್ಟಿದ್ದು, ಇನ್ನಿಬ್ಬರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ


Share It

You cannot copy content of this page