ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನ ಆಚರಣೆ ಮಾಡಿ ಪ್ರತಿಭಟನೆ ಮಾಡಿದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) 46 ಮುಖಂಡರು ಸೇರಿ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾಜಿ ಶಾಸಕ ಮನೋಹರ ಕಿಣೇಕರ, ಎಂಇಎಸ್ ಮುಖಂಡರಾದ ಶುಭಂ ಶೆಳ್ಳೆ, ರಮಾಕಾಂತ ಕೊಂಡುಸ್ಕ್, ವಿಕಾಸ ಕಲಘಟಗಿ, ಪ್ರಕಾಶ ಮರಗಾಳೆ ಸೇರಿ 46 ಮುಖಂಡರ ಮೇಲೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.1ರಂದು ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ದವಾಗಿ ಎಂಇಎಸ್ ಕಾರ್ಯಕರ್ತರು ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಕರಾಳ ದಿನ ಆಚರಿಸಿ, ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಅಲ್ಲದೆ ಗಡಿಭಾಗದಲ್ಲಿರುವ ಮರಾಠಿ ಬಹುಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವಂತೆ ಘೋಷಣೆ ಕೂಗಿ ಉದ್ಧಟನ ಪ್ರದರ್ಶಿಸಿದ್ದರು.