ಸುದ್ದಿ

ಮ್ಯಾನೇಜ್ಮೆಂಟ್ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 50 ಲಕ್ಷ ನೆರವು

Share It

ಬೆಂಗಳೂರು:ರಾಜ್ಯದ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಮ್ಯಾನೇಜ್ಮೆಂಟ್ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರು.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಪಿಯುಸಿಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ 25 ಲಕ್ಷ ರು. ಪಾವತಿಸಲು ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತದೆ.

ಅದೇ ವಿದ್ಯಾರ್ಥಿಯು ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನಃ 25 ಲಕ್ಷ ರು. ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.


Share It

You cannot copy content of this page