ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ NEET/JEE/CET ಆನ್‌ಲೈನ್ ಕೋಚಿಂಗ್ ತರಗತಿ’ ಆರಂಭಿಸಲಾಗಿದೆ.
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗಲು ನೀಟ್/ಜೆಇಇ/ಸಿಇಟಿ ಆನ್‌ಲೈನ್ ಕೋಚಿಂಗ್ ತರಗತಿಗಳಿಗೆ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಸೌಧದಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು ‘2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲಾದ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ. ತರಬೇತಿಗೆ ಪದವಿಪೂರ್ವ ಕಾಲೇಜಿನ 20,000 ವಿದ್ಯಾರ್ಥಿಗಳು ಹಾಗೂ ಆದರ್ಶ ಕಾಲೇಜಿನ 5,000 ವಿದ್ಯಾರ್ಥಿಗಳು ಸೇರಿ ಒಟ್ಟು 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ” ಎಂದು ಹೇಳಿದರು.