ಸುದ್ದಿ

ರೇಣುಕಸ್ವಾಮಿ ಕೊಲೆ ಕೇಸ್; ಆರೋಪಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ

Share It

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು 1300 ಪುಟಗಳಿರುವ ವರದಿ ಸಲ್ಲಿಸಿದ್ದು ಆರೋಪಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನಟ ದರ್ಶನ್ ಹಾಗೂ ಇತರ ಆರೋಪಿಗಳ ವಿರುದ್ಧ ಶನಿವಾರ 1300 ಪುಟಗಳ ಹೆಚ್ಚುವರಿ ಆರೋಪಪಟ್ಟಿಯನ್ನು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

20ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಕೊಲೆ ನೆಡೆದ ಪಟ್ಟಣಗೆರೆ ಶೆಡ್‌ನಲ್ಲಿ ಆರೋಪಿ ನಟ ದರ್ಶನ್ ತನ್ನ ಸಹಚರರ ಜತೆ ತೆಗೆಸಿಕೊಂಡಿರುವ ಎಂಟು ಫೋಟೊಗಳು, ತಾಂತ್ರಿಕ ಸಾಕ್ಷ್ಯ ಮತ್ತು ಎಫ್‌ಎಸ್ಎಲ್ ವರದಿಯನ್ನು ಆರೋಪಪಟ್ಟಿಯಲ್ಲಿ ಲಗತ್ತಿಸಲಾಗಿದೆ ಎಂದು ಮೂಲಗಳು ಹೇಳಿವೆ.ಜೂನ್ 9ರಂದು ಸಂಜೆ 6ರಿಂದ 8ರ ಅವಧಿಯಲ್ಲಿ ರೇಣುಕಸ್ವಾಮಿ ಮೃತಪಟ್ಟಿದ್ದರು ಎಂದು ವೈದ್ಯರು ವರದಿ ನೀಡಿದ್ದರು.


Share It

You cannot copy content of this page