ಬಿಡದಿ: ತೀರ ಸಂದಿಗ್ಧ ರಾಜಕೀಯ ಪರಿಸ್ಥಿತಿಯಲ್ಲಿ ಕಾರ್ಯಕರ್ತರ ಒತ್ತಡ ಹಾಗೂ ಜೆಡಿಎಸ್-ಬಿಜೆಪಿ ನಾಯಕರ ಮಾತಿಗೆ ತಲೆಬಾಗಿ ಚುನಾವಣೆಗೆ ಸ್ಪರ್ಧಿಸಿದೆ. ಕ್ಷೇತ್ರದ ಫಲಿತಾಂಶವು ನಮಗೆ ಆಘಾತ ತಂದಿದೆ. ಅಭ್ಯರ್ಥಿ ಆಯ್ಕೆ ವಿಳಂಬವಾಗದಿದ್ದಿದ್ದರೆ ನಾವು ಗೆಲ್ಲುತ್ತಿದ್ದೆವು ಎಂದು ಬಿಜೆಪಿ ಬೆಂಬಲಿತ ಪರಾಜಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಮ್ಮ ಪಕ್ಷ ಮುಸ್ಲಿಂ ಸಮುದಾಯದ ಪರವಾಗಿ ಹಲವು ವರ್ಷಗಳಿಂದ ನಿಂತರೂ ಮೀಸಲಾತಿ ಸೇರಿದಂತೆ ಎಷ್ಟೇ ಕೊಡುಗೆಗಳನ್ನು ನೀಡಿದರೂ ಅವರು ನಮ್ಮ ಕೈ ಹಿಡಿದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ಹಿಂದಿನಿಂದಲೂ ಜೊತೆಗಿದ್ದ ಅಲ್ಪಸಂಖ್ಯಾತರು ನಮ್ಮ ಕೈ ಹಿಡಿಯಲಿಲ್ಲ ಜೊತೆಗೆ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿ ಕೊಂಡಿರುವುದರಿಂದ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳದೆ ಮೈತ್ರಿ ನಾಯಕರ ಅಭಿಪ್ರಾಯ ಮತ್ತು ಭಾವನೆಗೆ ಗೌರವ ಕೊಟ್ಟೆವು. ಅದೇ ಕಾರಣಕ್ಕೆ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸುವ ಪ್ರಕ್ರಿಯೆ ವಿಳಂಬವಾಯಿತು.
ಎರಡೂ ಪಕ್ಷಗಳ ಕಾರ್ಯಕರ್ತರು ಯೋಧರಂತೆ ಕೆಲಸ ಮಾಡಿದರು. ಸೋಲು ಮತ್ತು ಗೆಲುವಿಗೆ ತನ್ನದೇ ಆದ ಕಾರಣಗಳಿರುತ್ತವೆ. ಬಹುಶಃ ಒಂದು ಮುಸ್ಲಿಂ ಮತಗಳು ಕಾಂಗ್ರೆಸ್ ಪರ ಕ್ರೋಡೀಕರಣಗೊಂಡವು ಇವು ಹಿನ್ನಡೆಯಾಗಲು ಕಾರಣ ಎಂದು ನಿಖಿಲ್ ಕುಮಾರಸ್ವಾಮಿ ವಿವರಣೆ ನೀಡಿದರು