ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದ ಸ್ಥಳದಲ್ಲಿ ಆರೋಪಿ ನಟ ದರ್ಶನ್ ಇದ್ದ ಬಗ್ಗೆ ಫೋಟೊ ಸಾಕ್ಷ್ಯ ದೊರೆತಿರುವ ಕಾರಣ ಅವರಿಗೆ ನೀಡಿರುವ ಜಾಮೀನು ರದ್ದತಿಗೆ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಕೃತ್ಯ ನಡೆದ ಸ್ಥಳದಲ್ಲಿ ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡು ಹೈದಾರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಪರೀಕ್ಷೆಗಾಗಿ ಕಳುಹಿಸಿದ್ದರು. ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಇರುವ ಫೋಟೋಗಳು ಲಭ್ಯವಾಗಿವೆ. ಮೇಲ್ನೋಟಕ್ಕೆ ದರ್ಶನ್ ಪಾತ್ರ ದೊಡ್ಡದಾಗಿ ಕಾಣುತ್ತಿದೆ. ಹೀಗಾಗಿ ದರ್ಶನ್‌ಗೆ ಮಂಜೂರು ಮಾಡಿರುವ ಜಾಮೀನು ರದ್ದು ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು’ ಎಂದರು.
ನಟನ ಜೊತೆಯಲ್ಲಿದ್ದ ವ್ಯಕ್ತಿಯೊಬ್ಬರು ವಿಡಿಯೊ ಮಾಡಿಕೊಂಡಿದ್ದರು. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದುಪಡಿಸುವಂತೆ ಕೋರಲಾಗುವುದು. ಮುಂದಿನ ಕ್ರಮ ಕೈಗೊಳ್ಳಲು ಪ್ರಕ್ರಿಯೆ ಆರಂಭವಾಗಿದೆ ಎಂದು ಮಾಧ್ಯಮಕ್ಕೆ ತಿಳಿಸಿದರು.