ಬೆಂಗಳೂರು: ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿದಂತೆ ಒಂಬತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು, ಡಿ. 31ಕ್ಕೆ ಕರ್ತವ್ಯ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ. ಈ ಅವಧಿಯೊಳಗೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಹೊಸ ವರ್ಷಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೇಡಿಕೆ ಈಡೇರಿಕೆ ಸಂಬಂಧ ಸಾರಿಗೆ ನಿಗಮಗಳ ಅಧಿಕಾರಿಗಳ ಜೊತೆ ಹಲವು ಸಭೆ ನಡೆಸಿದ್ದರೂ ಫಲಪ್ರದವಾಗಿಲ್ಲ, ಹೀಗಾಗಿ ಡಿ. 31ರಿಂದ ಬಸ್ ಮುಷ್ಕರ ಮಾಡುವುದಾಗಿ ಜಂಟಿ ಕ್ರಿಯಾ ಸಮಿತಿ ಬುಧವಾರ ಘೋಷಿಸಿದೆ.
ಡಿ.9ಕ್ಕೆ ಬೆಳಗಾವಿ ಚಲೋ: ಬಸ್ ಮುಷ್ಕರಕ್ಕೂ ಮುನ್ನ ಸರ್ಕಾರವನ್ನು ಎಚ್ಚರಿಸಲು ಬೆಳಗಾವಿ ಚಲೋ ನಡೆಸಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
ಡಿ. 9ರಿಂದ ಬೆಳ ಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಸಾರಿಗೆ ನೌಕರರಿಂದ ಬೆಳಗಾವಿ ಚಲೋ ನಡೆಸಲು ನಿರ್ಧರಿಸಲಾಗಿದೆ.